×
Ad

ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ರಾಷ್ಟ್ರಗೀತೆಯನ್ನು ಅವಮಾನಿಸಬಹುದು: ನಿರ್ಮಲಾನಂದನಾಥ ಸ್ವಾಮೀಜಿ

Update: 2022-05-31 12:34 IST

ಬೆಂಗಳೂರು: ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಅವಹೇಳನ ಮಾಡಿರುವವವರ ವಿರುದ್ದ ಸೈಬರ್ ಅಪರಾಧಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಮತ್ತೊಮ್ಮೆ ಒತ್ತಾಯಿಸಿರುವ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ,  ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ. 

ಈ ವಿಚಾರಕ್ಕೆ ಸಂಬಂಧಿಸಿ ಆದಿಚುಂಚನಗಿರಿ ಶ್ರೀಗಳು ಮತ್ತು ಒಕ್ಕಲಿಗರ ಸಂಘ ಸರಕಾರವನ್ನು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸ್ವಾಮೀಜಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. 

''ಈ ವಿಚಾರವನ್ನು ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’' ಎಂದು ನಿರ್ಮಲಾನಂದನಾಥ ಸ್ವಾಮೀಜಿ ಸಚಿವರಿಗೆ ತಿಳಿಸಿದರು ಎಂದೂ ಮೂಲಗಳು ಹೇಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News