×
Ad

ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿ.ಕೆ ಶಿವಕುಮಾರ್ ಗೆ ನ್ಯಾಯಾಲಯದಿಂದ ಸಮನ್ಸ್ ಜಾರಿ

Update: 2022-05-31 16:13 IST

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಐವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ. 

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್‌ಶೀಟ್‌ನ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇದೀಗ ಡಿಕೆ ಶಿವಕುಮಾರ್ ಮತ್ತು ಇತರರಿಗೆ ಸಮನ್ಸ್ ನೀಡಿದೆ.

ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಐವರಿಗೆ ಸೂಚಿಸಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News