ಮಣಿಪಾಲ: ವಿಶ್ವ ತಂಬಾಕು ರಹಿತ ದಿನದ ಕಲಾಕೃತಿ ಅನಾವರಣ
Update: 2022-05-31 18:54 IST
ಮಣಿಪಾಲ, ಮೇ೩೧: ವಿಶ್ವ ತಂಬಾಕು ರಹಿತ ದಿನಾಚರಣೆ-೨೦೨೨ರ ಅಂಗವಾಗಿ ಸಮುದಾಯ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಕಲಾವಿದ ಶ್ರೀನಾಥ್ ಮಣಿಪಾಲ ರಚಿಸಿದ ತಂಬಾಕು ಜಾಗೃತಿ ಪ್ರತಿಷ್ಟಾಪನಾ ಕಲಾಕೃತಿಯ ಅನಾವರಣ ಮಂಗಳವಾರ ನಡೆಯಿತು.
ಕೆಎಂಸಿಯ ಇಂಟರ್ಯಾಕ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಂಸಿಯ ಡೀನ್ ಡಾ.ಶರತ್ ರಾವ್ ಹಾಗೂ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ವೈದ್ಯಕೀಯ ವಿದ್ಯಾರ್ಥಿಗಳ ಸಮ್ಮುಖದಲ್ಲಿ ‘ತಂಬಾಕಿನ ಬಂಧನ-ಪರಿಸರದ ರೋಧನ’ ಎಂಬ ತಂಬಾಕು ಜಾಗೃತಿ ಕಲಾಕೃತಿಯನ್ನು ಅನಾವರಣ ಗೊಳಿಸಿದರು. ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕ, ಜಿಲ್ಲಾ ತಂಬಾಕು ನಿಯಂತ್ರಣ ವಿಭಾಗದ ಸದಸ್ಯ ಡಾ.ಮುರುಳೀಧರ ಕುಲಕರ್ಣಿ ಕಲಾಕೃತಿಯ ಕುರಿತು ಮಾಹಿತಿ ನೀಡಿದರು. ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ಹಾಗೂ ವಿಭಾಗದ ಪ್ರಾಧ್ಯಾಪಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.