ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Update: 2022-05-31 19:04 IST
ಉಡುಪಿ : ಕೇಂದ್ರ ಸರಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಗೊಂಡ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ ೧೭ರಿಂದ ಜೂನ್ ೧೬ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಗತ್ಯವಾದ ಮಾರ್ಗದರ್ಶನವನ್ನು ವೆಬ್‌ಸೈಟ್‌ನಲ್ಲಿ ಓದಿಕೊಳ್ಳಬಹುದು ಅಥವಾ ಸಹಾಯ ವಾಣಿ ೦೮೦-೨೫೫೦೨೫೨೦, ೯೪೮೩೮೬೨೦೨೦ನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ನಂ.: ೯೯೪೫೮೫೬೬೭೦, ೮೧೦೫೬೧೮೨೯೧ ಮತ್ತು ೮೧೯೭೪೪೦೧೫೫ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.