ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2022-05-31 14:16 GMT

ಬೆಂಗಳೂರು, ಮೇ 31: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಂಗಳವಾರ ಆದೇಶ ಹೊರಡಿಸಿದೆ.

ಹಣಕಾಸು ಇಲಾಖೆಯ ಉಪ ಕಾರ್ಯದರ್ಶಿ-3 ನಿತೀಶ್ ಕೆ. ಅವರನ್ನು ಹಣಕಾಸು ಇಲಾಖೆಯ ಉಪ ಕಾರ್ಯದರ್ಶಿ(ಬಜೆಟ್ ಮತ್ತು ಸಂಪನ್ಮೂಲ)ಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ರಾಮನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರನ್ನು ಹಣಕಾಸು ಇಲಾಖೆಯ ಉಪ ಕಾರ್ಯದರ್ಶಿ-3 ಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ತಿಪಟೂರು ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿದ್ದ ದಿಗ್ವಿಜಯ ಭೋಡ್ಕೆ ಅವರನ್ನು ರಾಮನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News