ರಸ್ತೆ ಗುಂಡಿ ಮುಚ್ಚುವ ಕಾಮಗಾರಿ; ಪೈಥಾನ್, ಎಆರ್‍ಟಿಎಸ್‍ಗೆ ಹಣ ಪಾವತಿ ಕ್ರಮಕ್ಕೆ ಬಿಬಿಎಂಪಿಗೆ ಕಾಲಾವಕಾಶ ನೀಡಿದ ಹೈಕೋ

Update: 2022-05-31 16:08 GMT

ಬೆಂಗಳೂರು, ಮೇ 31: ನಗರದ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಮುಂದಾಗಿರುವ ಅಮೆರಿಕನ್ ರೋಡ್ ಟೆಕ್ನಾಲಜೀಸ್ ಸಲ್ಯೂಷನ್ಸ್(ಎಆರ್‍ಟಿಎಸ್)ಗೆ ಬಾಕಿ ಹಣ ಪಾವತಿ ಹಾಗೂ ಪೈಥಾನ್ ಯಂತ್ರಕ್ಕೆ ಪ್ರತಿ ಗಂಟೆಗೆ ಎಷ್ಟು ಹಣ ಪಾವತಿಸಬೇಕೆಂಬ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುವುದು. ಹೀಗಾಗಿ, ಕಾಲಾವಕಾಶ ನೀಡಬೇಕೆಂಬ ಬಿಬಿಎಂಪಿ ಮನವಿಯನ್ನು ಹೈಕೋರ್ಟ್ ಮಾನ್ಯ ಮಾಡಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಸೂಕ್ತ ರೀತಿಯಲ್ಲಿ ರಸ್ತೆಗಳನ್ನು ನಿರ್ವಹಣೆ ಮಾಡಲು ಸರಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕೆಂದು ಕೋರಿ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅಮೆರಿಕನ್ ರೋಡ್ ಟೆಕ್ನಾಲಜೀಸ್ ಸಲ್ಯೂಷನ್ಸ್(ಎಆರ್‍ಟಿಎಸ್)ನವರು ಈಗಾಗಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪೂರ್ಣಗೊಳಿಸಿ ಎಂದು ಎಆರ್‍ಟಿಎಸ್ ಪರ ವಕೀಲರು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. 


ಎಆರ್‍ಟಿಎಸ್ ನಿರ್ದೇಶಕರ ಮೇಲೆ ಹಲ್ಲೆ: ಕ್ರಮದ ಬಗ್ಗೆ ವರದಿ ಕೇಳಿದ ಹೈಕೋರ್ಟ್  

2022ರ ಮೇ 27ರಂದು ನಡೆದ ಸಭೆಯಲ್ಲಿ ಬಿಬಿಎಂಪಿಯ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಅವರು,  ಅಮೆರಿಕನ್ ರೋಡ್ ಟೆಕ್ನಾಲಜೀಸ್ ಸಲ್ಯೂಷನ್ಸ್(ಎಆರ್‍ಟಿಎಸ್) ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೀಡಲಾಗಿರುವ ದೂರಿನ ಬಗ್ಗೆ ಕ್ರಮಕೈಗೊಳ್ಳಲಾಗಿದೆ ಎಂಬುದನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ತಿಳಿಸಬೇಕೆಂದು ಬಿಬಿಎಂಪಿಗೆ ಹೈಕೋರ್ಟ್ ಆದೇಶ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News