×
Ad

ಕೇಂದ್ರದಿಂದ ರಾಜ್ಯಕ್ಕೆ 8,633 ಕೋಟಿ ರೂ. ಜಿಎಸ್‌ಟಿ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

Update: 2022-06-01 09:44 IST

ಉಡುಪಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ 2022ರ ಮೇ31ರ ವರೆಗಿನ 8,633 ಕೋಟಿ ರೂ ಜಿಎಸ್‌ಟಿ ಪರಿಹಾರ ಮಂಜೂರು ಮಾಡಿದ್ದು, ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವರಾಗಿ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದ್ದಾರೆ.

ಕೇಂದ್ರವು ರಾಜ್ಯಗಳಿಗೆ ನೀಡಬೇಕಾದ 86,912 ಕೋಟಿ ರೂ. ಜಿಎಸ್‌ಟಿ ಪರಿಹಾರ ನೀಡಿದ್ದು, ಸುಭಿಕ್ಷ ಆರ್ಥಿಕತೆಯತ್ತ ಇದೊಂದು ಮಹತ್ವದ ಹೆಜ್ಜೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News