×
Ad

ರಾಜ್ಯದಲ್ಲಿ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡದಿಂದ ಉದ್ಯಮಿಗಳ ಮನೆ ಮೇಲೆ ದಾಳಿ

Update: 2022-06-01 11:23 IST
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಏಕಕಾಲದಲ್ಲಿ  50ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಐಟಿ ರಿಟರ್ನ್ಸ್‌ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಉದ್ಯಮಿಗಳ ಮೆನೆ ಮೇಲೆ ದಾಳಿ ನಡೆಸಿರುವ 600ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರಿನ ಸದಾಶಿವನಗರದ ಎಂಬೆಸಿ ಗ್ರೂಪ್​ ನಿರ್ದೇಶಕ ನರಪತ್ ಸಿಂಗ್ ಚರೋಡಿಯಾ ಫ್ಲ್ಯಾಟ್ ಮೇಲೆ ದಾಳಿ ನಡೆಸಲಾಗಿದೆ. ಎಂಬೆಸ್ಸಿ ಆರ್ಕಿಡ್​ ಅಪಾರ್ಟ್​ಮೆಂಟ್​ನಲ್ಲಿ ಫ್ಲ್ಯಾಟ್ ನಂಬರ್-609ರಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. 

ಇನ್ನು ಬೆಂಗಳೂರು ನಗರದಲ್ಲೇ 37 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News