ರಾಜಸ್ಥಾನದ ಚಿಂತನ ಶಿಬಿರದ ಬಳಿಕ ಕಾಂಗ್ರೆಸ್‌ ಖಾಲಿಯಾಗುತ್ತಿದೆ: ಬಿಜೆಪಿ ವ್ಯಂಗ್ಯ

Update: 2022-06-01 06:18 GMT

ಬಂಗಳೂರು: 'ಕಾಂಗ್ರೆಸ್ ನ ಭಾರತ್‌ ಜೋಡೋ ಅಭಿಯಾನ ಮತ್ತು ಸದಸ್ಯತ್ವ ಅಭಿಯಾನ ಹೇಗಿದೆ? ಅಭಿಯಾನದ ಮೂಲಕ ಕಾಂಗ್ರೆಸ್‌ ಸೇರಿದವರ ಸಂಖ್ಯೆ ಹೆಚ್ಚೋ ಅಥವಾ ಕಾಂಗ್ರೆಸ್‌ ತ್ಯಜಿಸಲಿರುವವರ ಸಂಖ್ಯೆ ಹೆಚ್ಚೋ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಬಿಜಪಿ ಪ್ರಶ್ನೆ ಮಾಡಿದೆ. 

ಈ ಕುರಿತು  ಸರಣಿ ಟ್ವೀಟ್ ಮಾಡಿರವ ಬಿಜೆಪಿ , ವಕೀಲ ಬೃಜೇಶ್ ಕಾಳಪ್ಪ ಅವರ ರಾಜೀನಾಮೆ ವಿಚಾರವನ್ನು ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಿದೆ.  

''ಕಪಿಲ್ ಸಿಬಲ್, ಆರ್ ಪಿಎನ್ ಸಿಂಗ್,  ಅಶ್ವಿನಿ ಕುಮಾರ್ ,  ಹಾರ್ದಿಕ್ ಪಟೇಲ್ ,  ಸಿಎಂ ಇಬ್ರಾಹಿಂ,  ಪ್ರಮೋದ್ ಮಧ್ವರಾಜ್ , ಮುಖ್ಯಮಂತ್ರಿ ಚಂದ್ರು, ಈಗ ಬ್ರಿಜೇಶ್ ಕಾಳಪ್ಪ! ಕಾಂಗ್ರೆಸ್ಸಿಗರೇ, ನಿಮ್ಮದು ಭಾರತ್‌ ಜೋಡೋ ಅಭಿಯಾನವೋ, ಕಾಂಗ್ರೆಸ್‌ ಛೋಡೋಅಭಿಯಾನ ವೋ?'' ಎಂದು ವ್ಯಂಗ್ಯವಾಡಿದೆ. 

ಇದನ್ನೂ ಓದಿ... ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ಬೃಜೇಶ್ ಕಾಳಪ್ಪ

ರಾಜಸ್ಥಾನದ ಚಿಂತನ ಶಿಬಿರದ ಬಳಿಕ ಕಾಂಗ್ರೆಸ್‌ ಖಾಲಿಯಾಗುತ್ತಿದೆ, G23 ಗುಂಪಿನ ಸಂಖ್ಯೆ ಕರಗುತ್ತಿದೆ. ಕಾರಣ ಸ್ಪಷ್ಟ, ನಕಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕಾಂಗ್ರೆಸ್ ಕಾರ್ಯಕರ್ತರೇ ಒಪ್ಪುತ್ತಿಲ್ಲ. ರಾಜ್ಯದಲ್ಲೂ ಕಾಂಗ್ರೆಸ್‌ ಚಿಂತನಾ ಶಿಬಿರ ಹಮ್ಮಿಕೊಂಡಿದೆ, ಅದರ ಮುನ್ನವೇ ರಾಜಿನಾಮೆ ಪರ್ವ ಆರಂಭಗೊಂಡಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News