×
Ad

​ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ನಿಧನ

Update: 2022-06-01 11:57 IST

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ (66) ಅವರು ಅಲ್ಪ ಕಾಲದ ಅಸೌಖ್ಯದಿಂದ ಪದವಿನಂಗಡಿಯಲ್ಲಿರುವ  ಸ್ವಗೃಹದಲ್ಲಿ ಬುಧವಾರ ನಿಧನರಾದರು.

ಶಶಿಧರ ಶೆಟ್ಟಿ ಅವರು ತುಳು ಸಂಘಟಕರಾಗಿದ್ದರು. 

ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಪ್ರಧಾನ  ಕಾರ್ಯದರ್ಶಿ, ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ನ ಜಿಲ್ಲಾ  ನಾಯಕ, ತುಳುಕೂಟ ಕುಡ್ಲದ ಹಿರಿಯ ಸದಸ್ಯ, ಶಾರದಾ ಕ್ಯಾಟರರ್ಸ್ ಸಂಸ್ಥೆಗಳ ಮಾಲಕ, ಪದವಿ ನಂಗಡಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷ, ಅ.ಭಾ.ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಯಾಗಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಸಂತಾಪ: ನಿಟ್ಟೆ ಶಶಿಧರ ಶೆಟ್ಟಿ ಅವರ ನಿಧನಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಬಂಟರ ಮಾತೃ ಸಂಘದ ತಾಲೂಕು ಸಮಿತಿಯ ಸಂಚಾಲಕ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ಇಂಟರ್ ನ್ಯಾಷನಲ್ ಬಂಟ್ಸ್ ವೇಲ್ಪೇರ್ ಟ್ರಸ್ಟ್ ನ ಗೌರವಾಧ್ಯಕ್ಷ ಎ. ಸದಾನಂದ ಶೆಟ್ಟಿ,  ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ , ಇಂದ್ರಾಳಿ ಜಯಕರ ಶೆಟ್ಟಿ, ದಾಮೋದರ ನಿಸರ್ಗ, ಕದ್ರಿ ನವನೀತ ಶೆಟ್ಟಿ, ಮುಲ್ಕಿ ಕರುಣಾಕರ ಶೆಟ್ಟಿ, ದಿವಾಕರ ಎಸ್.ಶೆಟ್ಟಿ  ಸಾಂಗ್ಲಿ, ತಾರಾನಾಥ ಶೆಟ್ಟಿ ಬೋಳಾರ, ಪ್ರದೀಪ್ ಆಳ್ವ ಕದ್ರಿ, ಲೀಲಾಕ್ಷ ಬಿ.ಕರ್ಕೇರ, ಎ.ಸಿ‌.ಭಂಡಾರಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮೃತರ ಪುತ್ರಿ ವಿದೇಶದಿಂದ ಆಗಮಿಸಬೇಕಾಗಿರುವುದರಿಂದ ಜೂನ್ 4 ರಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News