ಹನೂರು : ವಿದ್ಯುತ್ ಕಂಬದಿಂದ ಬಿದ್ದು ನೌಕರ ಮೃತ್ಯು

Update: 2022-06-01 09:37 GMT

ಹನೂರು : ವಿದ್ಯುತ್ ದುರಸ್ತಿಗಾಗಿ ಕಂಬವೇರಿದ್ದ ನೌಕರನೋರ್ವ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ತಾಲೂಕಿನ ಸುಳ್ಬಾಡಿ ಗ್ರಾಮದ ಬಳಿ ಬುಧವಾರ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ಪ್ರಶಾಂತ್ ಮೃತರು ಎಂದು ಗುರುತಿಸಲಾಗಿದ್ದು, ಅವರು ಸೆಸ್ಕ್ ನಲ್ಲಿ ಪವರ್ ಮೆನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ವಿದ್ಯುತ್ ದುರಸ್ತಿಗಾಗಿ ಕಂಬವೇರಿದ್ದ ಪ್ರಶಾಂತ್ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಕೂಡಲೇ ಅವರನ್ನು ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News