ಕಡಿಯಾಳಿ ದೇವಳದ ಸುತ್ತು ಪೌಳಿ, ತಿರುಗುವ ಮುಚ್ಚಿಗೆ ಉದ್ಘಾಟನೆ
Update: 2022-06-01 16:36 IST
ಉಡುಪಿ : ಈ ತಿಂಗಳ ೧೦ರವರೆಗೆ ಬ್ರಹ್ಮಕಲಶೋತ್ಸವ ನಡೆಯುತ್ತಿ ರುವ ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದೇವಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಅವರು ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸುತ್ತು ಪೌಳಿಯನ್ನು ಉದ್ಘಾಟಿಸಿದರು. ಬಳಿಕ ಅವರು ದೇವಸ್ಥಾನದ ತಿರುಗುವ ಮುಚ್ಚಿಗೆಯನ್ನು ಲೋಕಾರ್ಪಣೆಗೊಳಿಸಿದರು.
ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಎಸ್.ಸುನಿಲ್ ಕುಮಾರ್, ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್, ಸುಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.