ರಾಜ್ಯಸಭೆ ಚುನಾವಣೆ: ಪ್ರಭಾರಿಗಳನ್ನು ನೇಮಿಸಿದ ಬಿಜೆಪಿ
Update: 2022-06-01 20:05 IST
ಬೆಂಗಳೂರು, ಜೂ.1: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಭಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕಕ್ಕೆ ಕೇಂದ್ರ ಸಂಸ್ಕøತಿ ಸಚಿವ ಕಿಶನ್ ರೆಡ್ಡಿ, ರಾಜಸ್ಥಾನಕ್ಕೆ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣ ರಾಜ್ಯಕ್ಕೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಮಹಾರಾಷ್ಟ್ರ ರಾಜ್ಯಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಚುನಾವಣಾ ಪ್ರಭಾರಿಗಳನ್ನಾಗಿ ನೇಮಿಸಲಾಗಿದೆ.