×
Ad

ಛಾಯಾಚಿತ್ರದಿಂದ ಆತ್ಮಸ್ಥೈರ್ಯ ಹೆಚ್ಚಳ: ಸಂಜಯ್ ಗುಬ್ಬಿ

Update: 2022-06-01 22:46 IST

ಬೆಂಗಳೂರು, ಜೂ.1: ಛಾಯಾಚಿತ್ರ ಕಲೆಯಿಂದ ಮಕ್ಕಳಲ್ಲಿ ಮನೋವಿಕಾಸ ಮತ್ತು ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ವನ್ಯಜೀವಿ ಛಾಯಾಗ್ರಾಹಕ ಡಾ.ಸಂಜಯ್ ಗುಬ್ಬಿ ಅಭಿಪ್ರಾಯಪಟ್ಟರು.

ಬುಧವಾರ ನಗರದ ಕುಮಾರಕೃಪಾದ ಚಿತ್ರಕಲಾ ಪರಿಷತ್ತಿನಲ್ಲಿ ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕ ಅಮೋಘ ವರ್ಷ ಅವರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳು ಮೊಬೈಲ್ ಗೀಳು ಬಿಟ್ಟು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರಕೃತಿ ಸೌಂದರ್ಯ ಸವಿಯಬೇಕು ಎಂದು ನುಡಿದರು.

ಶಾಲೆಗಳಲ್ಲಿ ಕಲಿಯುವುದಕ್ಕಿಂತ ಪರಿಸರದಲ್ಲಿ ಕಲಿಯುವುದು ಹೆಚ್ಚಿದೆ. ಮತ್ತೊಂದೆಡೆ ಇತ್ತೀಚೆಗೆ ಮಕ್ಕಳು ಮೊಬೈಲ್‍ನಿಂದ ತಮ್ಮ ಅಮೂಲ್ಯ ಸಮಯವನ್ನು ಕಳೆದುಕೊಳ್ಳುತ್ತಿದ್ದಾರೆ. ಅದರಿಂದ ಹೊರಗೆ ಬಂದರೆ ನಮ್ಮ ಸುತ್ತಮುತ್ತಲಿನ ಸುಂದರ ಪ್ರಕೃತಿಯನ್ನು ಕಾಣಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲೆ ಮಾಲತಿ ಆರ್.ನಾರಾಯಣ್, ಹೊಳೇಮತ್ತಿ ನೇಚರ್ ಫೌಂಡೇಷನ್‍ನ ಸಂಜಯ್‍ಗುಬ್ಬಿ, ನೇಚರ್ ಇನ್ ಸಹಸಂಸ್ಥಾಪಕ ರೋಹಿತ್‍ವರ್ಮ, ಪತ್ರಕರ್ತ ವಿಶ್ವೇಶ್ವರ ಭಟ್ ಸೇರಿದಂತೆ ಪ್ರಮುಖರಿದ್ದರು.

ನೋಡುಗರ ಗಮನ ಸೆಳೆದ ಛಾಯಚಿತ್ರ

ಅಮೋಘವರ್ಷ ಅವರು ಕ್ಯಾಮರಾದಲ್ಲಿ ಸೆರೆ ಹಿಡಿದಿರುವ ವನ್ಯಜೀವಿಗಳ ಕುರಿತಾದ ವಿಭಿನ್ನ ಛಾಯಾಚಿತ್ರಗಳು ಇಲ್ಲಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನೋಡುಗರ ಗಮನ ಸೆಳೆಯುತ್ತಿದೆ.

‘ಮೋಘೀಸ್ ಟೇಲ್ಸ್’ ಶೀರ್ಷಿಕೆಯಡಿ ಆಯೋಜಿಸಿರುವ ಈ ಛಾಯಾಚಿತ್ರಗಳ ಪ್ರದರ್ಶನದಲ್ಲಿ ಹುಲಿ, ಕರಿಚಿರತೆ ಸೇರಿದಂತೆ ವಿಭಿನ್ನ ಪ್ರಾಣಿ ಪಕ್ಷಿಗಳ ಸುಮಾರು 134 ಛಾಯಾಚಿತ್ರಗಳು ಪ್ರದರ್ಶನದಲ್ಲಿವೆ.

ಪ್ರಮುಖವಾಗಿ ಅರಣ್ಯದಲ್ಲಿ ವಾಸಿಸುವ ಪ್ರಾಣಿ ಪಕ್ಷಿಗಳ ಚಲನವಲನಗಳನ್ನು ಈ ಪ್ರದರ್ಶನದ ಪರಿಚಯಿಸುವ ಮೂಲಕ ವನ್ಯಜೀವಿ ಸಂರಕ್ಷಣೆ ಕುರಿತು ವಿಭಿನ್ನ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ.


60 ಸಾವಿರ ಚಿತ್ರಗಳನ್ನು ಸೆರೆಹಿಡಿದ ಬಾಲಕ

ಹಿರಿಯ ಐಪಿಎಸ್ ಅಧಿಕಾರಿ, ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್. ಹರ್ಷ ಅವರ ಪುತ್ರ 14 ವರ್ಷದ ಅಮೋಘವರ್ಷ ಬಾಲ್ಯದಿಂದ ಈವರೆಗೂ ಸುಮಾರು 60 ಸಾವಿರ ಚಿತ್ರಗಳನ್ನು ಸೆರೆಹಿಡಿದಿದ್ದಾರೆ. ಅವುಗಳಲ್ಲಿ ಅತ್ಯುತ್ತಮವಾದ 134 ಛಾಯಾಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಈ ಪ್ರದರ್ಶನ ಜೂ.5ರವರೆಗೂ ಇರಲಿದೆ.

ಅಮೋಘವರ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News