ಗುಜರಾತ್:‌ ಕಾಂಗ್ರೆಸ್‌ ತ್ಯಜಿಸಿದ್ದ ಪಾಟಿದಾರ್‌ ಮುಖಂಡ ಹಾರ್ದಿಕ್‌ ಪಟೇಲ್‌ ಬಿಜೆಪಿ ಸೇರ್ಪಡೆ

Update: 2022-06-02 07:31 GMT
Photo: ANI 

ಅಹಮದಾಬಾದ್: ಗುಜರಾತ್ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದ ಕೆಲವೇ ದಿನಗಳ ಬಳಿಕ ಗುರುವಾರ ಬಿಜೆಪಿ ಸೇರಿದ್ದಾರೆ ಎಂದು NDTV ವರದಿ ಮಾಡಿದೆ.

ಕಳೆದ ತಿಂಗಳು  ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದ ಹಾರ್ದಿಕ್ ಪಟೇಲ್ ಗುಜರಾತ್ ರಾಜ್ಯ ಚುನಾವಣೆಗೆ ಕೆಲವು ತಿಂಗಳುಗಳ ಮೊದಲು ಗಾಂಧಿನಗರದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಗುರುವಾರ ಬೆಳಗ್ಗೆ ಪಕ್ಷದ ಕಚೇರಿಯ ಹೊರಗೆ ಪಾಟಿದಾರ್ ನಾಯಕನನ್ನು ಬಿಜೆಪಿಗೆ ಸ್ವಾಗತಿಸುವ ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ತನ್ನ ಜೀವನದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸುವೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸಣ್ಣ ಸೈನಿಕನಾಗಿ ಕೆಲಸ ಮಾಡುವೆ ಎಂದು ಗುರುವಾರ ಬೆಳಗ್ಗೆ ಪಟೇಲ್ ಟ್ವೀಟಿಸಿದ್ದರು.

"ನಾನು ಯಾವುದೇ ಹುದ್ದೆಗೆ ಯಾರ ಮುಂದೆಯೂ ಬೇಡಿಕೆ ಇಟ್ಟಿಲ್ಲ. ಕೆಲಸ ಮಾಡಲು ಬಿಜೆಪಿ ಸೇರುತ್ತಿದ್ದೇನೆ. ಕಾಂಗ್ರೆಸ್ ಪಕ್ಷವು ಯಾವುದೇ ರೀತಿಯ ಕೆಲಸ ಮಾಡಲು ಬಯಸುವುದಿಲ್ಲ ಎಂದು ನಾನು ನಂಬುತ್ತೇನೆ. ಬೇರೆ ಪಕ್ಷಗಳ ಮುಖಂಡರು ಬಿಜೆಪಿ ಸೇರುವಂತೆ ಮನವಿ ಮಾಡುತ್ತೇನೆ. ಪ್ರಧಾನಿ ಮೋದಿ ಅವರು ಇಡೀ ಜಗತ್ತಿಗೆ ಹೆಮ್ಮೆ" ಎಂದು ಅಧಿಕೃತವಾಗಿ ಬಿಜೆಪಿಗೆ ಸೇರುವ ಮೊದಲು  ANI ಗೆ ಪಟೇಲ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News