×
Ad

ಮಂಗಳೂರು ವಿವಿ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Update: 2022-06-02 17:23 IST

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘದ ವತಿಯಿಂದ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಮಂಗಳೂರು ವಿವಿ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇತ್ತೀಚೆಗೆ ನಡೆಯಿತು.

ಆರೊಗ್ಯ ತಪಾಸಣಾ ಶಿಬಿರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಪ್ರೊ.ಕೆ.ಎಸ್ ಜಯಪ್ಪ ಅವರು ಉದ್ಘಾಟಿಸಿ, ಮಂಗಳೂರು ವಿವಿ ಶಿಕ್ಷಕೇತರ ಉದ್ಯೋಗಿಗಳ ಸಂಘದ ವತಿಯಿಂದ ವಾರ್ಷಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರಲ್ಲಿ ಈ ಉಚಿತ ಆರೋಗ್ಯ ತಪಸಣಾ ಶಿಬಿರವು ಅತ್ಯಂತ ಮಹತ್ವಪೂರ್ಣವಾದುದಾಗಿದೆ ಎಂದರು.

ಶಾರಾದ ಆರ್ಯುವೇದ ಕಾಲೇಜಿನ ಮುಖ್ಯ ವೈದ್ಯಕೀಯ ಅಧಿಕಾರಿ ಡಾ.ರವಿ ಗಣೇಶ್ ಎಂ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರು ಶಿಕ್ಷಕೇತರ ಉದ್ಯೋಗಿಗಳ  ಸಂಘದ ಅಧ್ಯಕ್ಷರಾದ ಬಾಲಿನಿ, ಶ್ರೀ ಮಾಧವ ಸೋಮೇಶ್ವರ ವೈದ್ಯಕೀಯ ನಿಧಿ ಸಲಹಾ ಸಮಿತಿಯ ಅಧ್ಯಕ್ಷರಾದ ಶಿವಾನಂದ‌ ಪೂಜಾರಿ, ಜೊತೆ ಕಾರ್ಯದರ್ಶಿ ಗಾಯತ್ರಿ‌ ನಾಯಕ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 100 ಕ್ಕೂ ಹೆಚ್ಚು‌ಉದ್ಯೋಗಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News