ಮಂಗಳೂರು: ಮನಪಾ ಇಂಜಿನಿಯರ್ ಎಸಿಬಿ ಬಲೆಗೆ
Update: 2022-06-02 20:55 IST
ಮಂಗಳೂರು, ಜೂ.2: ಕಾಮಗಾರಿಯ ಬಿಲ್ ಮಂಜೂರು ಮಾಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಮಹಾನಗರಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಅತಿಕ್ ರೆಹಮಾನ್‌ನನ್ನು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣದ ವಿವರ: ಕೊಂಚಾಡಿ ದೇರೆಬೈಲು ಮಂದಾರಬೈಲು ಜಯಲಿಂಗಪ್ಪ ಎಂಬವರು ನಿರ್ವಹಿಸಿದ ಕಾಮಗಾರಿಯ ಬಿಲ್‌ನ್ನು ಮಂಜೂರು ಮಾಡಲು ಅತಿಕ್ ರೆಹಮಾನ್ 3 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.
ಗುರುವಾರ ಸಂಜೆ ಲಂಚವನ್ನು ಸ್ವೀಕರಿಸುವ ವೇಳೆ ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಭ್ರಷ್ಟಾಚಾರ ನಿಗ್ರಹ ದಳದ ಪಶ್ಚಿಮ ವಲಯದ ಪೊಲೀಸ್ ಅಧೀಕ್ಷೃಕ ಸಿ.ಎ. ಸೈಮನ್‌ರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷೃಕ ಗುರುರಾಜ್, ಶ್ಯಾಮ್ ಸುಂದರ್ ಹೆಚ್. ಮತ್ತವರ ತಂಡ ಕಾರ್ಯಾಚರಣೆ ನಡೆಸಿತ್ತು..