ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಗೆ ಕೋವಿಡ್ ಪಾಸಿಟಿವ್

Update: 2022-06-02 17:35 GMT

ಬೆಂಗಳೂರು, ಜೂ. 2: ಆರೋಗ್ಯ ಸಚಿವ ಡಾ. ಕೆ. ಸುಧಾಕರ್  ಅವರಿಗೆ ಕೋವಿಡ್-19ಲಕ್ಷಣಗಳು ಕಾಣಿಸಿಕೊಂಡಿದ್ದು, ತಾವು ಕೊರೋನ ಪಾಸಿಟಿವ್ ಆಗಿರುವುದಾಗಿ ಹೇಳಿದ್ದಾರೆ. 

ಈ ಕುರಿತು ಸಚಿವರು ಟ್ವೀಟ್ ಮಾಡಿದ್ದು,  '' ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ'' ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News