ಬೆಂಗಳೂರಿನ ಮೂಲಸೌಕರ್ಯ ಕಾಮಗಾರಿಗಳಿಗೆ ವೇಗ ನೀಡಲು ತೀರ್ಮಾನ: ಸಿಎಂ ಬೊಮ್ಮಾಯಿ

Update: 2022-06-02 18:43 GMT

ಬೆಂಗಳೂರು, ಜೂ.2: ಬೆಂಗಳೂರು ನಗರದಲ್ಲಿ ಜಾರಿಯಲ್ಲಿರುವ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ವೇಗ ನೀಡಿ ಅವುಗಳ ಅನುಷ್ಠಾನವನ್ನು ತ್ವರಿತವಾಗಿ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಗುರುವಾರ ಮಲ್ಲೇಶ್ವರಂನ ಬಿಜೆಪಿ ಕಚೇರಿಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರೋತ್ಥಾನ ಯೋಜನೆಯಡಿ ಬೆಂಗಳೂರಿನಲ್ಲಿ ಕೆಲಸಗಳು ಪ್ರಾರಂಭವಾಗಿವೆ. ಮಳೆಯಿಂದಾಗಿ ಕೆಲಸಕ್ಕೆ ತೊಂದರೆಯಾಗಿದ್ದು, ಈಗ ಪುನಹ ಕಾಮಗಾರಿಗಳಿಗೆ ವೇಗ ನೀಡಲಾಗುತ್ತಿದೆ. ಸಬ್ ಅರ್ಬನ್ ರೈಲು ಯೋಜನೆಗಳಿಗೆ ಟೆಂಡರ್ ಪ್ರಕ್ರಿಯೆ ಆಗಿದ್ದು, ಕಾಮಗಾರಿ ಪ್ರಾರಂಭವಾಗುತ್ತದೆ ಎಂದರು. 

ಮೆಟ್ರೋ 2 ನೇ ಹಂತದ ಕಾಮಗಾರಿ ಒಂದು ವರ್ಷ ಮುಂಚೆಯೇ ಮುಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಮುಖ್ಯ ಚರಂಡಿ ನಿರ್ಮಾಣ ಕಾರ್ಯಗಳಿಗೂ ಆದೇಶ ನೀಡಲಾಗಿದೆ. 75 ಪಾರ್ಕ್ ಮತ್ತು ಕೆರೆಗಳ ಅಭಿವೃದ್ಧಿಗೆ ಈಗಾಗಲೇ ಆದೇಶವನ್ನು ನೀಡಲಾಗಿದೆ. ಬೆಂಗಳೂರಿಗೆ ಹಲವು ಸೌಲಭ್ಯಗಳನ್ನು ನೀಡಲು ಆಡಳಿತಾತ್ಮಕ ಅನುಮೋದನೆಗಳನ್ನು ನೀಡಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News