×
Ad

ಗಾಝಿಯಾಬಾದ್ ಗೋಡೌನ್‌ನಲ್ಲಿ ಭಾರೀ ಬೆಂಕಿ, ಸ್ಥಳಕ್ಕೆ ಧಾವಿಸಿದ 12 ಅಗ್ನಿಶಾಮಕ ಇಂಜಿನ್‌ಗಳು

Update: 2022-06-03 09:58 IST
ಸಾಂದರ್ಭಿಕ ಚಿತ್ರ, Photo:ANI

ಗಾಝಿಯಾಬಾದ್: ಉತ್ತರ ಪ್ರದೇಶದ ಗಾಝಿಯಾಬಾದ್ ಜಿಲ್ಲೆಯ ಶಹೀದ್ ನಗರ ಮೆಟ್ರೋ ನಿಲ್ದಾಣದ ಬಳಿ ಶುಕ್ರವಾರ ಬೆಳಗ್ಗೆ ಗೋಡೌನ್‌ನಲ್ಲಿ ಭಾರೀ  ಬೆಂಕಿ ಕಾಣಿಸಿಕೊಂಡಿದೆ.

ಮಾಹಿತಿ ಪಡೆದ ನಂತರ 12 ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದವು.

ಈ ದುರ್ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಹಾಗೂ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

"12 ಕ್ಕೂ ಹೆಚ್ಚು ಅಗ್ನಿಶಾಮಕ ಇಂಜಿನ್ ಗಳು ಬೆಂಕಿ ನಿಯಂತ್ರಿಸುವ  ಕಾರ್ಯಾಚರಣೆಯಲ್ಲಿ ತೊಡಗಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ" ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ (ಸಿಎಫ್‌ಒ) ಸುನಿಲ್ ಕುಮಾರ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಇನ್ನು ಗೋದಾಮಿನಲ್ಲಿ ಲಭ್ಯವಿದ್ದ ಬಟ್ಟೆ ಹಾಗೂ ಪ್ಲಾಸ್ಟಿಕ್ ವಸ್ತುಗಳಿಂದ ಬೆಂಕಿ ವ್ಯಾಪಿಸಿದ್ದರಿಂದ ಬೆಂಕಿ ಸಂಪೂರ್ಣವಾಗಿ ನಂದಿಸಲು ಇನ್ನೂ ಸ್ವಲ್ಪ ಸಮಯ ಹಿಡಿಯಲಿದೆ ಎಂದು  ಅವರು  ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News