×
Ad

ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್. ರಕ್ಷಾ ರಾಮಯ್ಯ ನೇಮಕ

Update: 2022-06-03 12:17 IST

ಬೆಂಗಳೂರು, ಜೂ, 3; ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಭಾರತೀಯ ಯುವ ಕಾಂಗ್ರೆಸ್ ಗೆ ತಾವು ಸಲ್ಲಿಸಿದ ಸೇವಯನ್ನು ಪರಿಗಣಿಸಿ “ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಡ್ತಿ ನೀಡಲು ಸಂತಸವಾಗುತ್ತಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದೆ “ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದ್ದಾರೆ.

ಪಕ್ಷ ಸಂಘಟನೆಗಾಗಿ ತಾವು ನಿಮ್ಮ ಪೂರ್ಣ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸುತ್ತೀರಿ. ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಕ್ರಿಯಾಶೀಲ ನಾಯಕತ್ವದಲ್ಲಿ ತಾವು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಾ ರಾಮಯ್ಯ, ಪಕ್ಷ ನೀಡಿರುವ ಜವಾಬ್ದಾರಿಯನ್ನು ವಿನಮ್ರವಾಗಿ ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಇತ್ತೀಚೆಗೆ ವಿಶೇಷವಾಗಿ ಉದಯಪುರದಲ್ಲಿ ಜರುಗಿದ ಕಾಂಗ್ರೆಸ್ ಚಿಂತನ ಸಮಾವೇಶದಲ್ಲಿ ಕೈಗೊಂಡ ನಿರ್ಣಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ರಾಷ್ಟ್ಟಮಟ್ಟದಲ್ಲಿ ಯುವ ಕಾಂಗ್ರೆಸ್ ಮತ್ತು ಯುವ ಸಮೂಹದ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News