×
Ad

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಅಧಿಕಾರಿ, ಸಿಬ್ಬಂದಿ ಸ್ಪಂದಿಸಬೇಕು: ಕೆ.ಎಸ್.ಈಶ್ವರಪ್ಪ

Update: 2022-06-03 16:38 IST

ಶಿವಮೊಗ್ಗ : ಮಕ್ಕಳಿಗೆ ಶಿಕ್ಷಣ ಅತಿ ಮುಖ್ಯವಾಗಿದ್ದು ಸರ್ಕಾರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಕ್ಕಾಗಿ ಸಾಕಷ್ಟು ಶ್ರಮಿಸುತ್ತಿದೆ. ವಿದ್ಯಾರ್ಥಿಗಳ ಯಾವುದೇ ಸಮಸ್ಯೆಗಳಿಗೆ ಅಧಿಕಾರಿ-ಸಿಬ್ಬಂದಿ ಸೂಕ್ತವಾಗಿ ಸ್ಪಂದಿಸಬೇಕೆಂದು ಕೆ.ಎಸ್.ಈಶ್ವರಪ್ಪ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಎನ್‌ಟಿ ರಸ್ತೆ ಬಳಿ ನಿರ್ಮಿಸಲಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳೊಂದಿಗೆ ಶಾಸಕರು ಸಂವಾದ ನಡೆಸಿದಾಗ, ವಿದ್ಯಾರ್ಥಿ ಮುರಳೀಧರ್ ಮಾತನಾಡಿ, ಹಾಸ್ಟೆಲ್ ಶುಚಿತ್ವ, ನಿರ್ವಹಣೆ ಆಹಾರದ ರುಚಿ ಉತ್ತಮಗೊಳ್ಳಬೇಕು ಎಂದರು.

ವಿದ್ಯಾರ್ಥಿ ಪುನೀತ್ ಮಾತನಾಡಿ, ಶುದ್ದ ಕುಡಿಯುವ ನೀರು ಮತ್ತು ಕಸ ವಿಲೇವಾರಿಗೆ ಅವಕಾಶ ಮಾಡಿಕೊಡಬೇಕೆಂದು ಕೋರಿದರು.

ಇನ್ನೋರ್ವ ವಿದ್ಯಾರ್ಥಿ ಉನ್ನತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಹಾಸ್ಟೆಲ್ ವ್ಯವಸ್ಥೆ ಗಮನಿಸಬೇಕು ಹಾಗೂ ಹಾಸ್ಟೆಲ್ ಗ್ರಂಥಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಅನುಕೂಲಕರವಾದ ಪುಸ್ತಕಗಳಿಗೆ ಅವಕಾಶ ಮಾಡಿಕೊಡ ಬೇಕೆಂದು ಕೋರಿದರು.

ವಿದ್ಯಾರ್ಥಿಗಳ ಆಹವಾಲು ಆಲಿಸಿ ಪ್ರತಿಕ್ರಿಯಿಸಿದ ಶಾಸಕ ಈಶ್ವರಪ್ಪ, ಅಧಿಕಾರಿ/ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಉತ್ತಮ ಊಟ ನೀಡಲು ಅವಶ್ಯಕವಾದ ಕ್ರಮಗಳನ್ನು ವಹಿಸಬೇಕು. ಹಾಗೂ ಹಾಸ್ಟೆಲ್ ನಿರ್ವಹಣೆಗೆ ಸಾಕಷ್ಟು ಸಿಬ್ಬಂದಿ ನೇಮಕ ಮಾಡಲಾಗಿದ್ದು ಅಧಿಕಾರಿ/ಸಿಬ್ಬಂದಿ ಈ ಬಗ್ಗೆ ಹೆಚ್ಚಿನ ಗಮನ ಮತ್ತು ಕಾಳಜಿ ವಹಿಸಿ ನಿರ್ವಹಣೆ ಮಾಡಬೇಕೆಂದು ಸೂಚನೆ ನೀಡಿದರು.

ಮಹಾನಗರಪಾಲಿಕೆ ಸುನೀತಾ ಅಣ್ಣಪ್ಪ ಮಾತನಾಡಿ, ಕಟ್ಟಡ ಹೊಸದಾಗಿದ್ದಾಗ ಸುಂದರವಾಗಿರುತ್ತದೆ. ಅದರ ನಿರ್ವಹಣೆ ಕೇವಲ ಇಲಾಖೆ ಅಥವಾ ಪಾಲಿಕೆಗೆ ಸೇರಿಲ್ಲ. ಬದಲಾಗಿ ವಿದ್ಯಾರ್ಥಿಗಳು ಕೂಡ ತಮ್ಮ ಕೊಠಡಿ, ವಿದ್ಯಾರ್ಥಿನಿಲಯವನ್ನು ಸ್ವಚ್ಚವಾಗಿ, ಅಚ್ಚುಕಟ್ಟಾಗಿ ಇಟ್ಟುಕೊಳ್ಳುವ ಮೂಲಕ ಮುಂದೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಹಾಗೂ ಕಸ ವಿಲೇವಾರಿಗಾಗಿ ಪಾಲಿಕೆ ವತಿಯಿಂದ ನೂತನ ಹಾಸ್ಟೆಲ್‌ಗೆ ವಾಹನವನ್ನು ಕಳುಹಿಸಿಕೊಡಲಾಗುವುದು. ಕಸವನ್ನು ಸಮರ್ಪಕವಾಗಿ ಹಾಕುವುದು ನಿಮ್ಮ ಜವಾಬ್ದಾರಿ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News