×
Ad

2023ರ ಚುನಾವಣೆಯಲ್ಲಿ ಪಕ್ಷ ಹೊತ್ತುರಿದು, ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲಿದೆ: ಬಿಜೆಪಿ ಭವಿಷ್ಯ

Update: 2022-06-03 17:34 IST

ಬೆಂಗಳೂರು, ಜೂ. 3: ‘ನವ ಸಂಕಲ್ಪ ಶಿಬಿರಕ್ಕೆ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಕೈಕೊಟ್ಟಿದ್ದಾರೆ. ಕಾಂಗ್ರೆಸ್ ‘ನವ ಸಂಕಲ್ಪ ಶಿಬಿರ'ದಲ್ಲಿ ಅಸಮಾಧಾನದ ಬೆಂಕಿ ಹತ್ತಿಕೊಂಡಿದೆ. ಈ ಬೆಂಕಿಯ ಕಾವಿನಿಂದ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಹೊತ್ತುರಿದು, ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲಿದೆ' ಎಂದು ಬಿಜೆಪಿ ಇಂದಿಲ್ಲಿ ಭವಿಷ್ಯ ನುಡಿದಿದೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಖರ್ಗೆ ಜೆಡಿಎಸ್ ಪಕ್ಷದ ಪರವಾಗಿ ವಕಾಲತ್ತು ಆರಂಭಿಸಿದಾಗಲೇ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ತಮ್ಮ ವೈಮನಸ್ಸು ಮರೆಯುವ ಮಾತುಗಳನ್ನಾಡುತ್ತಿದ್ದಾರೆ. ಅತಂತ್ರವಾದಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವ ಭಯವೇ? ದಲಿತರನ್ನು ಕಟ್ಟಿ ಹಾಕಲು ಈಗಲೇ ರಣತಂತ್ರವೇ?' ಎಂದು ಪ್ರಶ್ನಿಸಿದೆ.

‘ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಸಿ.ಎಂ.ಇಬ್ರಾಹೀಂ ಮಾತುಗಳನ್ನು ಕಾಂಗ್ರೆಸ್ ನಾಯಕರು ನಿರ್ಲಕ್ಷಿಸಿದರು. ಇಂದು ಅದೇ ಇಬ್ರಾಹೀಂ ಮಾತಿಗೆ ಬೆಲೆ ಕೊಡಲೇಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಕಾಂಗ್ರೆಸ್ ಈಗ, ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಸೋಲಿಸುತ್ತದೋ ಅಥವಾ ಅಲ್ಪಸಂಖ್ಯಾತ ರಾಜ್ಯಾಧ್ಯಕ್ಷರ ಮಾತನ್ನು ತಿರಸ್ಕರಿಸುತ್ತದೋ?' ಎಂದು ಬಿಜೆಪಿ ಪ್ರಶ್ನಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News