ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ
Update: 2022-06-03 19:11 IST
ಉಡುಪಿ : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಯಿಂದ ಭಾಗವಹಿಸಿದ ಅಶ್ವಿನ್ ಸನಿಲ್ ಪವರ್ ಲಿಫ್ಟಿಂಗ್ ಮತ್ತು ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕ ಹಾಗೂ 100 ಮೀಟರ್ ಓಟದಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.