ಹೊಸದಿಲ್ಲಿ: ಜೆಎನ್‌ಯು ಆವರಣದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

Update: 2022-06-03 16:46 GMT

ಹೊಸದಿಲ್ಲಿ: ಜೆಎನ್‌ಯು ವಿಶ್ವ ವಿದ್ಯಾಲಯದ ಆವರಣದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.  ಮೃತ ವ್ಯಕ್ತಿ ನಲವತ್ತರ ಆಸುಪಾಸಿನವರಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ವ್ಯಕ್ತಿ ಕೆಲವು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ದಿಲ್ಲಿ ಪೊಲೀಸರ ಅಪರಾಧ ಮತ್ತು ವಿಧಿವಿಜ್ಞಾನ ತಂಡವು ಸ್ಥಳದಲ್ಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News