×
Ad

ಕರ್ನಾಟಕ ಪತ್ರಕರ್ತರ ನೆನಪಿನ ಸಂಚಿಕೆ ಲೋಕಾರ್ಪಣೆ

Update: 2022-06-03 23:36 IST

ಬೆಂಗಳೂರು, ಜೂ.3: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕಲಬುರಗಿಯಲ್ಲಿ ನಡೆದ 35ನೆ ರಾಜ್ಯ ಪತ್ರಕರ್ತರ ಸಮ್ಮೇಳನ ಸವಿನೆನಪಿಗಾಗಿ ಹೊರ ತಂದಿರುವ ಕರ್ನಾಟಕ ಪತ್ರಕರ್ತ ನೆನಪಿನ ಸಂಚಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಪುಂಡಲೀಕ ಭೀ ಬಾಳೋಜಿ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಐಎಫ್ ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕೆಯುಡಬ್ಲ್ಯೂಜೆ ಮಾಜಿ ಅಧ್ಯಕ್ಷ ಜಿ.ಕೆ.ಸತ್ಯ, ರಾಜ್ಯ ಸಮಿತಿಯ ಸದಸ್ಯರಾದ ವಾಸುದೇವ ಹೊಳ್ಳ, ದೇವರಾಜು ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News