ಕುವೆಂಪು ವಿರಚಿತ ನಾಡಗೀತೆ ತಿರುಚಿದವರ ವಿರುದ್ಧ ಕ್ರಮಕ್ಕೆ ಸೈಬರ್ ಕ್ರೈಮ್ ಪೊಲೀಸರಿಗೆ ಸೂಚನೆ: ಸಿಎಂ ಬೊಮ್ಮಾಯಿ

Update: 2022-06-03 18:48 GMT

ಬೆಂಗಳೂರು: ಕುವೆಂಪು ಹಾಗೂ ನಾಡಗೀತೆ , ಬಸವಣ್ಣ ಅವರಿಗೆ ಅವಮಾನ ಮಾಡಲಾಗಿದೆಯೆಂಬ ಆರೋಪಕ್ಕೆ ಸಂಬಂಧಿಸಿ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ವರದಿ ಪರಿಶೀಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಲವೊಂದು ನಿರ್ಧಾರಗಳನ್ನು ಕೈಗೊಂಡಿದ್ದಾರೆ. 

ಈ ಸಂಬಂಧ ಪ್ರಕಟನೆ ಹೊರಡಿಸಿರುವ ಸಿಎಂ ಬೊಮ್ಮಾಯಿ, 'ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಹಾಗೂ ಇತರರ ಆಶಯದಂತೆ ರಾಷ್ಟ್ರಕವಿ ಕುವೆಂಪುರವರು ವಿರಚಿತ ನಾಡಗೀತೆಯನ್ನು ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ದಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್ ಕ್ರೈಮ್ ಬೆಂಗಳೂರು ಇವರಿಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ' ಎಂದು ತಿಳಿಸಿದ್ದಾರೆ.

ಇದನ್ನೂ ಓದಿ... ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ: ಸಿಎಂ ಬೊಮ್ಮಾಯಿ

ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ. ಇನ್ನು  ಪ್ರೊ.ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಕುರಿತಾದ 7 (ಏಳು) ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10 (ಹತ್ತು) ಕ್ಕೇರಿಸಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News