ಕೋವಿಡ್ ಪರೀಕ್ಷೆ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚಿಸಿದ ಮಹಾರಾಷ್ಟ್ರ ಸರಕಾರ

Update: 2022-06-04 04:38 GMT
Photo:PTI 

ಮುಂಬೈ: ಪ್ರಕರಣಗಳು ಹೆಚ್ಚುತ್ತಿರುವಾಗ ಪರೀಕ್ಷಿಸಲಾಗುತ್ತಿರುವ ಮಾದರಿಗಳ ಸಂಖ್ಯೆಯು ಕುಸಿದಿರುವುದರಿಂದ ಕೊರೋನವೈರಸ್ ಪರೀಕ್ಷೆಯನ್ನು ಹೆಚ್ಚಿಸಲು ಮಹಾರಾಷ್ಟ್ರ ಆರೋಗ್ಯ ಇಲಾಖೆ ಶುಕ್ರವಾರ ಜಿಲ್ಲಾ ಮತ್ತು ನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದೆ.

ಜಿಲ್ಲಾಧಿಕಾರಿಗಳು, ಮುನ್ಸಿಪಲ್ ಕಾರ್ಪೊರೇಷನ್‌ಗಳು ಹಾಗೂ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಪ್ರದೀಪ್ ವ್ಯಾಸ್, ಎಲ್ಲಾ ಜಿಲ್ಲೆಗಳು ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಅನುಪಾತವನ್ನು ಕನಿಷ್ಠ 60 ಪ್ರತಿಶತದಷ್ಟು ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವಕೊರೋನ  ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ರೈಲುಗಳು, ಬಸ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು ಹಾಗೂ  ಶಾಲೆಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಧರಿಸಲು ಜನರಿಗೆ ಸಲಹೆ ನೀಡಬೇಕು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ  ಕಳೆದ ವಾರದಲ್ಲಿ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡಿದೆ.  ಜೂನ್ 1 ರಂದು 1,081 ಪ್ರಕರಣಗಳು ವರದಿಯಾಗಿವೆ.ಇದು ಫೆಬ್ರವರಿ 24 ರ ಬಳಿಕ ಹೆಚ್ಚಿನ ಪ್ರಕರಣವಾಗಿದೆ.

ಪುನರಾವರ್ತಿತ ಸೂಚನೆಗಳ ಹೊರತಾಗಿಯೂ ರಾಜ್ಯದಲ್ಲಿ ಪರೀಕ್ಷೆಯು ಗಣನೀಯವಾಗಿ ಕಡಿಮೆಯಾಗಿದೆ. ಜೂನ್ 1 ರ ಅಂಕಿಅಂಶಗಳ ಪ್ರಕಾರ, 26 ಜಿಲ್ಲೆಗಳಲ್ಲಿ ನಡೆಸಿದ ಸಾಪ್ತಾಹಿಕ ಪರೀಕ್ಷೆಗಳ ಸಂಖ್ಯೆಯಲ್ಲಿ ಸಂಪೂರ್ಣ ಕೊರತೆ ಕಂಡುಬಂದಿದೆ, ಇದು ಕಳವಳಕ್ಕೆ ಕಾರಣವಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಒಟ್ಟಾರೆ ಪರೀಕ್ಷೆಯನ್ನು ತಕ್ಷಣ  ಹೆಚ್ಚಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News