ಹೆಡಗೇವಾರ್ ಪಠ್ಯವನ್ನು ಕೈಬಿಡುವುದಿಲ್ಲ: ಸಿಎಂ ಬೊಮ್ಮಾಯಿ
Update: 2022-06-04 13:56 IST
ಚಿತ್ರದುರ್ಗ, ಜೂ.4: ಆರೆಸ್ಸೆಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರಿಗೆ ಸಂಬಂಧಿಸಿದ ಪಠ್ಯವನ್ನು ಕೈಬಿಡುವುದಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಿರಿಯೂರು ತಾಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಡಗೇವಾರ್ ವಿಚಾರದ ಪಠ್ಯ ಇದ್ದರೆ ತಪ್ಪೇನು ಎಂದು ಪ್ರಶ್ನಿಸಿದರು.
ರೋಹಿತ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯ ಕಾರ್ಯ ಮುಗಿದಿದೆ. ಹೀಗಾಗಿ ಅದನ್ನು ವಿಸರ್ಜನೆ ಮಾಡಲಾಗಿದೆಯೇ ಹೊರತು ರದ್ದು ಮಾಡಿಲ್ಲ. ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಪಠ್ಯಪುಸ್ತಕ ವಿಚಾರದಲ್ಲಿ ಚರ್ಚೆ ನಡೆದ ಬಳಿಕ ಪರಿಶೀಲಿಸುವುದಾಗಿ ಆರಂಭದಲ್ಲೇ ಹೇಳಿದ್ದೆ. ವಾಸ್ತವಾಂಶದ ಆಧಾರದ ಮೇರೆಗೆ ಕೆಲ ಬದಲಾವಣೆ ಮಾಡಲಾಗುತ್ತಿದೆ. ಮಠಾಧೀಶರ ಒತ್ತಡಕ್ಕೆ ಮಣಿದು ಈ ತೀರ್ಮಾನ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.