ಧ್ವನಿವರ್ಧಕ ಬಳಕೆಗೆ ವಿಧಿಸುವ ಶುಲ್ಕ ಕಡಿತಗೊಳಿಸಿ: ಶಾಫಿ ಸಅದಿ

Update: 2022-06-04 13:55 GMT

ಬೆಂಗಳೂರು, ಜೂ.4: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡಲು ಪೊಲೀಸ್ ಇಲಾಖೆ ವಿಧಿಸುತ್ತಿರುವ ಶುಲ್ಕವನ್ನು ಕಡಿತಗೊಳಿಸುವಂತೆ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಮನವಿ ಮಾಡಿದ್ದಾರೆ.

ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದು ಅವರು ಮನವಿ ಮಾಡಿದ್ದಾರೆ.

ಶಬ್ದ ಮಾಲಿನ್ಯ ತಡೆಗಟ್ಟಲು ನಿಗದಿತ ಸಮಯದಲ್ಲಿ ಧಾರ್ಮಿಕ ಸ್ಥಳವಾದ ಮಸೀದಿಗಳಲ್ಲಿ ಧ್ವನಿ ವರ್ಧಕ ಗಳನ್ನು ನಮ್ಮ ವಕ್ಫ್ ಸಂಸ್ಥೆಗಳಿಂದ ಬಳಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಲಾಗುತ್ತಿದೆ ಎಂದು ಶಾಫಿ ಸ ಅದಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಅನುಮತಿ ಪಡೆಯಬೇಕಾದರೆ ಕಾನೂನಿನ ಅನ್ವಯ  ನಗದು ಕಟ್ಟಬೇಕಾಗಿದೆ. ನಮ್ಮ ಸುಮಾರು ವಕ್ಫ್ ಸಂಸ್ಥೆಗಳಲ್ಲಿ ಯಾವುದೇ ಆದಾಯವಿರುವುದಿಲ್ಲ ಹಾಗೂ ಎಲ್ಲ ಖರ್ಚು ವೆಚ್ಚಗಳನ್ನು ಸರಿದೂಗಿಸಿಕೊಂಡು ಧಾರ್ಮಿಕ ಸಂಸ್ಥೆಗಳನ್ನು ನಡೆಸಬೇಕಾಗಿದೆ. ಆದುದರಿಂದ, ಪೊಲೀಸ್ ಇಲಾಖೆಯಿಂದ ಧ್ವನಿವರ್ಧಕ ಗಳನ್ನು ಬಳಸಲು ಅನುಮತಿ ಪಡೆಯುವ ಸಂದರ್ಭದಲ್ಲಿ ವಿಧಿಸುವ  ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಅವರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News