×
Ad

ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಉದ್ಘಾಟನೆ

Update: 2022-06-04 20:19 IST

ಉಡುಪಿ : ಉಡುಪಿ ಇನಾಯತ್ ಆರ್ಟ್ ಗ್ಯಾಲರಿ ಹಾಗೂ ಜಯಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಕುಂಜಿಬೆಟ್ಟುವಿನ ಇನಾ ಯತ್ ಆರ್ಟ್ ಗ್ಯಾಲರಿನಲ್ಲಿ ಆಯೋಜಿಸಲಾಗಿತ್ತು.

ಸ್ಪರ್ಧೆಯನ್ನು ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಅಂಚನ್, ಇಶಾ ಫೌಂಡೇಶನ್‌ನ ಉಡುಪಿ ಜಿಲ್ಲಾ ಪ್ರಮುಖ ಪ್ರವೀಣ್ ಕುಮಾರ್, ನಿವೃತ್ತ ಬ್ಯಾಂಕ್ ಅಧಿಕಾರಿ ಶಶಿಧರ ಶೆಟ್ಟಿ, ಇನಾಯತ್ ಆರ್ಟ್ ಗ್ಯಾಲರಿಯ ನಿರ್ದೇಶಕ ಲಿಯಾಖತ್ ಆಲಿ, ಜಯಂಟ್ಸ್ ಗ್ರೂಪ್ ಉಡುಪಿ ಅಧ್ಯಕ್ಷ ಇಕ್ಬಾಲ್ ಮನ್ನಾ ಮೊದಲಾದವರು ಉಪಸ್ಥಿತರಿದ್ದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಾಧಕರಾದ ನರಸಿಂಹ ಮೂರ್ತಿ, ಶ್ರೀನಿತ್ಯಾ, ಶಿವಾನಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಸ್ಪರ್ಧೆಯ ತೀರ್ಪುಗಾರರಾದ ಸಕು ಪಾಂಗಾಳ ಹಾಗೂ ಜೀವನ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಜಯಂಟ್ಸ್ ಗ್ರೂಪ್ ಉಡುಪಿ ಅಧ್ಯಕ್ಷ ಇಕ್ಬಾಲ್ ಮನ್ನಾ, ದಿನಕರ ಅಮೀನ್, ಇಕ್ಬಾಲ್ ಮನ್ನಾ ಉಪಸ್ಥಿತರಿ ದ್ದರು. ರಾಘವೇಂದ್ರ ಪ್ರಭು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News