ಪರಿಷ್ಕೃತ ಪಠ್ಯದಲ್ಲಿ ಆದಿವಾಸಿಗಳ ಅವಹೇಳನ ಆರೋಪ: ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು

Update: 2022-06-04 15:38 GMT

ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಕಾಡು ಜನಾಂಗದ ಬಗ್ಗೆ ಅವಹೇಳನಕಾರಿಯಾಗಿ ಪರಿಷ್ಕೃತ ಪಠ್ಯಪುಸ್ತಕದಲ್ಲಿ ಮುದ್ರಿಸಿದೆ ಎಂದು ಆರೋಪಿಸಿ ರಾಮನಗರ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಕೆಯಾಗಿದೆ.

ಇರುಳಿಗ( ಅರಣ್ಯವಾಸಿ) ಕ್ಷೇಮಾಭಿವೃದ್ಧಿ ಸಂಘ ದೂರು ನೀಡಿದ್ದು, ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ  ರೋಹಿತ್ ಚಕ್ರತೀರ್ಥ ಹಾಗೂ ಸಮಿತಿಯ ಸದಸ್ಯರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

10ನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಗಳು ಎಂಬ ಶೀರ್ಷಿಕೆಯಲ್ಲಿ “ಸಂಸ್ಕೃತಿಯು ರಕ್ತದಲ್ಲಿ ಹರಿಯಬೇಕು. ಆಧುನಿಕ ಕಾಲದಲ್ಲಿ ಬೇಕಾದಷ್ಟು ಜ್ಞಾನಸಂಪತ್ತನ್ನು ಪಡೆದ ದೇಶಗಳನ್ನು ನೋಡಿರುವೆವು. ಆದರೆ ಆದರಿಂದ ಏನು ಪ್ರಯೋಜನ? ಅವರು ಕಾಡುಜನರಂತೆ ಇರುವರು. ಅವರಲ್ಲಿ ಸಂಸ್ಕೃತಿ ಇಲ್ಲ” ಎಂಬುವುದಾಗಿ ಅವಹೇಳನಕಾರಿಯಾಗಿ ಮುದ್ರಿಸಿ ಆದಿವಾಸಿಗಳನ್ನು (ಕಾಡುವಾಸಿ) ಉದ್ದೇಶಪೂರ್ವಕವಾಗಿ ಅನಾಗರಿಕರೆಂದು ನಿಂದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News