×
Ad

ಗುರುವಾಯನಕೆರೆ: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ; ಇಬ್ಬರು ಆರೋಪಿಗಳ ಬಂಧನ

Update: 2022-06-04 22:37 IST

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಬಕಾರಿ ಇಲಾಖೆ ಅಧಿಕಾರಿಗಳು ಕರ್ತವ್ಯದಲ್ಲಿದ್ದಾಗ ಘಟನೆ ಬೆಳಕಿಗೆ ಬಂದಿದ್ದು ಆರೋಪಿಗಳಾದ ತೌಸಿಕ್ ಮತ್ತು ರಫೀಕ್ ಎಂಬವರನ್ನು ಬಂಧಿಸಿ 41.530 ಗ್ರಾಂ. ಗಾಂಜಾ ವಶಕ್ಕೆ ಪಡೆಯಲಾಗಿದೆ.

ಅಬಕಾರಿ ಉಪ ನಿರೀಕ್ಷಕರು ಬೆಳ್ತಂಗಡಿ ವಲಯದಲ್ಲಿ ಪ್ರಕರಣ ದಾಖಲಿಸಿ, ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಈ ವೇಳೆ ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಹಾಗೂ ಬೆಳ್ತಂಗಡಿ ವಲಯದ ಅಧಿಕಾರಿಗಳು, ಸಿಬ್ಬಂದಿ ಸಹಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News