×
Ad

ಯೋಗ ತಾಲೀಮು ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

Update: 2022-06-05 09:15 IST

ಮೈಸೂರು: ಜೂನ್ 21ರ ವಿಶ್ವ ಯೋಗ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆ ಆವರಣದಲ್ಲಿ ಯೋಗ ಪಟುಗಳಿಂದ ಯೋಗ ತಾಲೀಮು ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಧಾನಮಂತ್ರಿಗಳು ಮೈಸೂರಿಗೆ ಆಗಮಿಸುತ್ತಿರುವುದರಿಂದ ಜೂನ್ 5 ಮತ್ತು 12ರಂದು ಯೋಗ ತಾಲೀಮು ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಯಾರಿಗೆಲ್ಲಾ ಅವಕಾಶ ನೀಡಬೇಕು ಎಂಬುದರ ಬಗ್ಗೆ 12ರ ನಂತರ ತೀರ್ಮಾನ ಮಾಡಲಾಗುವುದು ಎಂದರು.

ಸರ್ಕಾರಿ, ಖಾಸಗಿ, ವಿಶೇಷಚೇತನರು ಸೇರಿದಂತೆ ಯೋಗ ಮಾಡುವ ಎಲ್ಲರಿಗೂ ಅವಕಾಶ ನೀಡಲಾಗುವುದು. ಕಾರ್ಯಕ್ರಮಕ್ಕೆ  ನೋಂದಣಿ ಆರಂಭವಾಗಿಲ್ಲ. ನೋಂದಣಿ ಸಂಬಂಧ ನಿರ್ದೇಶಕರನ್ನು ನೇಮಿಸಲಾಗಿದೆ. ಮುಖ್ಯಮಂತ್ರಿಗಳು ಜೂನ್ 8ಕ್ಕೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಅಂದು ಕಾರ್ಯಕ್ರಮದ ರೂಪುರೇಷೆ ಅಂತಿಮವಾಗಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದಿಂದ 12 ಸಾವಿರ, ಕೇಂದ್ರ ಸರ್ಕಾರದಿಂದ ಮೂರು ಸಾವಿರ ಸೇರಿ ಒಟ್ಟು 15 ಸಾವಿರ ನೋಂದಣಿ ಆಗಲಿದೆ ಎಂಬ ಮಾಹಿತಿ ಇದೆ. ಆದರೆ ಸದ್ಯಕ್ಕೆ ಯಾವುದು ಅಂತಿಮವಾಗಿಲ್ಲ. ಮುಖ್ಯಮಂತ್ರಿಗಳು ಜೂ.8ಕ್ಕೆ ಬರಲಿದ್ದು ಅಂದು ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಶಾಸಕರುಗಳಾದ ರಾಮದಾಸ್, ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರಾ, ಯೋಗ ಫೆಡರೇಷನ್‌ ನ ಮುಖ್ಯಸ್ಥರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News