ಸಾಗರ; ಕೆರೆಯಲ್ಲಿ ಮುಳುಗಿ ಬಾಲಕ ಮೃತ್ಯು
Update: 2022-06-05 09:50 IST
ಸಾಗರ : ಸಮೀಪದ ಹೊಸಂತೆ ಗ್ರಾಮದ ಹೈಸ್ಕೂಲ್ ವಿದ್ಯಾರ್ಥಿ ಸಂದೇಶ (16) ಕೆರೆಯಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಮಧ್ಯಾಹ್ನದ ವೇಳೆಗೆ ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಮೃತ ವಿದ್ಯಾರ್ಥಿ ತಂದೆ, ತಾಯಿ ಹಾಗೂ ತಮ್ಮನ್ನು ಅಗಲಿದ್ದಾನೆ. ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸಾಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಬಗ್ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.