ಆರೆಸ್ಸೆಸ್‌ ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ : ಸಿಎಂ ಬಸವರಾಜ ಬೊಮ್ಮಾಯಿ

Update: 2022-06-05 08:26 GMT

ಹುಬ್ಬಳ್ಳಿ : ಆರೆಸ್ಸೆಸ್‌ ಸಂಘಟನೆಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರೆಸ್ಸೆಸ್‌ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಆರೆಸ್ಸೆಸ್‌ ಸಂಘಟನೆ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ ತೊಡಗಿದೆ. ಹಲವಾರು ಸಂದರ್ಭಗಳಲ್ಲಿ ಅನಾಹುತಗಳಾದಾಗ ಜನರ ಸಂಕಷ್ಟಕ್ಕೆ ಸ್ಪಂದಿಸಲು ಅವರ ಪರವಾಗಿ ಆರೆಸೆಸ್ಸ್ ನಿಂತಿದೆ. ವಿವಿಧ ರಾಜ್ಯಗಳಲ್ಲಿ ಆರೆಸ್ಸೆಸ್‌ ಉತ್ತಮವಾಗಿ ಕೆಲಸ ಮಾಡಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಆರೆಸ್ಸೆಸ್‌ ವಿರೋಧಿಗಳು. ಅವರ ಇಂತಹ ಧೋರಣೆಯಿಂದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದು, ಕರ್ನಾಟಕದಲ್ಲಿಯೂ ಹೀಗೆ ಆಗಲಿದೆ ಎಂದರು.

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿಯೂ ರಾಜಕೀಯ ಮಾಡುತ್ತಿದ್ದು, ಶಿಕ್ಷಣ ಸಚಿವರು ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News