×
Ad

ಬಿಜೆಪಿ ವಕ್ತಾರರಿಂದ ಪ್ರವಾದಿ ನಿಂದನೆ ಪ್ರಕರಣ: ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದ ಕತರ್

Update: 2022-06-05 19:10 IST

ಹೊಸದಿಲ್ಲಿ: ಟಿವಿ ಚರ್ಚಾ ಕಾರ್ಯಕ್ರಮದಲ್ಲಿ ಪ್ರವಾದಿ ನಿಂದನೆ ಮಾಡಿದ ಪ್ರಕರಣವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ ಇದೀಗ ಕತರ್‌ ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದೆ ಎಂದು ndtv.com ವರದಿ ಮಾಡಿದೆ. ಇಬ್ಬರು ವಕ್ತಾರರನ್ನು ವಜಾಗೊಳಿಸಿದ ಬಳಿಕವೂ ಪ್ರಕರಣವನ್ನು ಬಿಜೆಪಿ ಮತ್ತು ಕೇಂದ್ರ ಸರಕಾರ ನಿರ್ವಹಿಸಿದ ರೀತಿಯ ಕುರಿತು ಸಾಮಾಜಿಕ ತಾಣದಲ್ಲಿ ವಿಶ್ವದಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. 

"ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಸರಕಾರವು ಸಾರ್ವಜನಿಕ ಕ್ಷಮೆ ಯಾಚಿಸಬೇಕು ಹಾಗೂ ಖಂಡನೆ ವ್ಯಕ್ತಪಡಿಸಬೇಕು" ಎಂದು ಕತರ್‌ ಆಗ್ರಹಿಸಿದೆ. ಜೊತೆಗೆ, ಇಬ್ಬರು ವಕ್ತಾರರನ್ನು ವಜಾಗೊಳಿಸಿದ್ದನ್ನು ಸ್ವಾಗತಿಸಿದೆ. ಇಂತಹಾ ಹೇಳಿಕೆಗಳು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೇ ಎಂದೂ ಅದು ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News