ಪಿಎಫ್‌ಐ ಬ್ಯಾಂಕ್ ಖಾತೆ ಮುಟ್ಟುಗೋಲು ಖಂಡಿಸಿ ಪ್ರತಿಭಟನೆ
Update: 2022-06-05 19:17 IST
ಉಡುಪಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ಇಡಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿರುವುದನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಕಾರರನ್ನುದ್ದೇಶಿಸಿ ಮಾತಮಾಡಿದ ಪಿಎಫ್‌ಐ ಉಡುಪಿ ಜಿಲ್ಲಾ ಮುಖಂಡ ಹನೀಫ್ ಮೂಳೂರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ತನ್ನ ರಾಜಕೀಯ ಹಾಗೂ ಸೈದ್ದಾಂತಿಕ ವಿರೋಧಿಗಳನ್ನು ಎದುರಿಸಲು ಇಡಿ, ಎನ್‌ಐಎ, ಐಟಿಯಂತಹ ಸಂಸ್ಥೆಗಳನ್ನು ದುರುಪಯೋಗ ಪಡಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಪಿಎಫ್‌ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶುಕೂರ್ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು. ತೌಹೀದ್ ಕಾರ್ಯಕ್ರಮ ನಿರೂಪಿಸಿದರು.