×
Ad

ಉಡುಪಿ ಜಿಲ್ಲಾ ವರ್ತಕರ ಸಂಘದ ಸಮಾವೇಶ

Update: 2022-06-05 21:26 IST

ಉಡುಪಿ : ಉಡುಪಿ ಜಿಲ್ಲಾ ವರ್ತಕರ ಸಂಘದ ೨೫ನೇ ವರ್ಷದ ಸಮಾವೇಶವನ್ನು ಅಂಬಲಪಾಡಿ ಶ್ರೀಜನಾದರ್ನ ಮತ್ತು ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ರವಿವಾರ ಆಯೋಜಿಸಲಾಗಿತ್ತು.

ಸಮಾವೇಶವನ್ನು ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ. ವಿಜಯ್ ಬಲ್ಲಾಳ್ ಉದ್ಘಾಟಿಸಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿದರು. ಈ ಸಂದರ್ಭದಲ್ಲಿ ವಿವಾಹ, ಉಪನಯನ, ಗೃಹಪ್ರವೇಶ, ಶಿಕ್ಷಣ, ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು ವಿತರಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ವರ್ತಕರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ದಿವಾಕರ ಸನಿಲ್ ಮುಖ್ಯ ಅತಿಥಿ ಗಳಾಗಿದ್ದರು. ಉಡುಪಿ ಜಿಲ್ಲಾ ವರ್ತಕರ ಸಂಘದ ಅಧ್ಯಕ್ಷ ಐರೋಡಿ ಸಹನಶೀಲ ಪೈ, ಉಪಾಧ್ಯಕ್ಷ ಎಂ.ವಸಂತ, ಕಾರ್ಯದರ್ಶಿ ಪಾದೆಮಠ ನಾಗರಾಜ ಅಡಿಗ, ಪಿಆರ್‌ಓ ವಿಶ್ವನಾಥ್ ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News