ಪ್ರತಿ ತಿಂಗಳ ಮೂರನೇ ಶನಿವಾರ ಅದಾಲತ್ ನಡೆಸಲು ಸಚಿವ ಸುನಿಲ್ ಕುಮಾರ್ ಸೂಚನೆ

Update: 2022-06-05 17:06 GMT

ಬೆಂಗಳೂರು, ಜೂ. 5: ‘ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್ ಅದಾಲತ್ ನಡೆಬೇಕು. ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೆಯ ಹಳ್ಳಿಗೂ ಖುದ್ದು ಭೇಟಿ ನೀಡಿ, ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು' ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಆದೇಶಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯಲ್ಲಿ ಕಾರ್ಯಕ್ರಮ ರೂಪಿಸಬೇಕು. ಹಳ್ಳಿಗಳ ಅದಾಲತ್ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವರೆಗಿನ ಅಧಿಕಾರಿಗಳು ಸಮಸ್ಯೆಗಳನ್ನು ಆಲಿಸಿ, ಪರಿಹಾರ ನೀಡಬೇಕು' ಎಂದು ನಿರ್ದೇಶನ ನೀಡಿದ್ದಾರೆ.

ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News