ರಾಜ್ಯಸಭೆ ಚುನಾವಣೆ ಸೋನಿಯಾ ಗಾಂಧಿಯಿಂದ ವೀಕ್ಷಕರ ನಿಯೋಜನೆ
Update: 2022-06-05 22:56 IST
ಹೊಸದಿಲ್ಲಿ, ಜೂ. 5: ಜೂನ್ 10ರಂದು ರಾಜ್ಯಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಭೂಪೇಶ್ ಬಾಗೇಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ವೀಕ್ಷಕರನ್ನಾಗಿ ನಿಯೋಜಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಹಾರಾಷ್ಟ್ರಕ್ಕೆ, ಭೂಪೇಶ್ ಬಾಗೇಲ್ ಹಾಗೂ ರಾಜೀವ್ ಶುಕ್ಲಾ ಅವರನ್ನು ಹರ್ಯಾಣಕ್ಕೆ, ಪವನ್ ಕುಮಾರ್ ಬನ್ಸಾಲ್ ಹಾಗೂ ಟಿ.ಎಸ್. ಸಿಂಗ್ ದಿಯೊ ಅವರನ್ನು ರಾಜಸ್ಥಾನಕ್ಕೆ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ. ಹರ್ಯಾಣ, ರಾಜಸ್ಥಾನ ಹಾಗೂ ಮಹಾರಾಷ್ಟ್ರ ರಾಜ್ಯ ಸಭೆ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ. ಈ ನಡುವೆ ಹರ್ಯಾಣ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಪಕ್ಷೇತರ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.