ಗೌರಿ ಲಂಕೇಶ್ ಹತ್ಯೆ ಪ್ರಕರಣ: ಜು.4ರಿಂದ ನಿರಂತರ ವಿಚಾರಣೆ ಆರಂಭ

Update: 2022-06-06 13:40 GMT

ಬೆಂಗಳೂರು, ಜೂ.6: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಜು.4ರಿಂದ ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್‍ನಲ್ಲಿ ಆರಂಭವಾಗಲಿದೆ. ಅಲ್ಲದೆ, ಪ್ರಕರಣ ಸಂಬಂಧ ವಿಶೇಷ ಪ್ರಾಸಿಕ್ಯೂಟರ್ ಕೋರ್ಟ್‍ಗೆ ಸಾಕ್ಷ್ಯಗಳ ಪಟ್ಟಿ ಸಲ್ಲಿಸಿದ್ದಾರೆ. 

ಸಾಕ್ಷ್ಯಗಳ ಪಟ್ಟಿಗೆ ಪ್ರತಿಯಾಗಿ ಆರೋಪಿಗಳ ಪರ ವಕೀಲರು ತನಿಖೆಯ ಭಾಗವೆನಿಸಿರುವ ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಪಟ್ಟಿಯ ಪ್ರತಿ ನೀಡುವಂತೆ ಮನವಿ ಸಲ್ಲಿಸಿದರು. ಈ ಮನವಿಗೆ ಏನಾದರೂ ಆಕ್ಷೇಪಣೆ ಇದ್ದರೆ ಸಲ್ಲಿಸಿ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣದ ವಿಚಾರಣೆಯನ್ನು ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಇದೇ ಜುಲೈ 4 ರಿಂದ 8ರವರೆಗೆ ನಿತ್ಯವೂ ನಡೆಸಲಿದೆ. ಗೌರಿ ಅವರನ್ನು 2017ರ ಸೆಪ್ಟೆಂಬರ್ 5ರಂದು ರಾಜರಾಜೇಶ್ವರಿ ನಗರದಲ್ಲಿನ ಅವರ ಮನೆಯ ಹೊರಗೆ ಆಗುಂತಕರು ಗುಂಡಿಟ್ಟು ಹತ್ಯೆ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News