ನಾಯಿಗಳ ನಿಯಂತ್ರಣ ಕುರಿತಂತೆ ಮಾಹಿತಿ ಒದಗಿಸಿ: ಹೈಕೋರ್ಟ್

Update: 2022-06-07 11:55 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.7: ರಾಜ್ಯದಲ್ಲಿ ಪ್ರಾಣಿ ಜನನ ನಿಯಂತ್ರಣ(ನಾಯಿಗಳು) ಅಧಿನಿಯಮ-2001ರ ಜಾರಿಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ಹತ್ತು ದಿನಗಳಲ್ಲಿ ಮಾಹಿತಿ ಒದಗಿಸಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ವಕೀಲ ಎಲ್.ರಮೇಶ್ ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿದೆ.

ಅರ್ಜಿಯಲ್ಲಿ ಪ್ರತಿವಾದಿಗಳಾದ ಸರಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದೆ. ಪ್ರಾಣಿ ಜನನ ನಿಯಂತ್ರಣ ಅಧಿನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News