ಶಾಲೆಗಳಿಗೆ ಸುರಕ್ಷತಾ ಪತ್ರವನ್ನು ಪಡೆಯುವಂತೆ ಸೂಚನೆ
Update: 2022-06-07 20:28 IST
ಬೆಂಗಳೂರು, ಜೂ.7: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಕಟ್ಟಡ ಮತ್ತು ಅಗ್ನಿ ಸುರಕ್ಷತೆ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳುವುದು ಕಡ್ಡಾಯ ಆಗಿರುತ್ತದೆ. ಹಾಗಾಗಿ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ಸಮಯದಲ್ಲಿ ಕಟ್ಟಡ ಮತ್ತು ಅಗ್ನಿ ಸುರಕ್ಷತೆ ಪ್ರಮಾಣ ಪತ್ರವನ್ನು ಪಡೆದುಕೊಳ್ಳುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರಕಾರವು ಲೋಕೋಪಯೋಗಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಪ್ರಮಾಣ ಪತ್ರಗಳನ್ನು ನೀಡುವಂತೆ ಸುತ್ತೋಲೆ ಹೊರಡಿಸಿದೆ. ಅದರಂತೆ ಶಾಲೆಗಳ ಮುಖ್ಯಸ್ಥರಿಗೆ ಹಾಗೂ ಆಡಳಿತ ಮಂಡಳಿಗಳಿಗೆ ಪ್ರಮಾಣ ಪತ್ರವನ್ನು ಪಡೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.