ಇಸ್ಲಾಂ ಧರ್ಮದ ಬಗ್ಗೆ ಅವಹೇಳನ: ರಾಧಾಕೃಷ್ಣ ಅಡ್ಯಂತಾಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು

Update: 2022-06-07 17:16 GMT
ರಾಧಾಕೃಷ್ಣ ಅಡ್ಯಂತಾಯ

ವಿಟ್ಲದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಇಸ್ಲಾಂ ಧರ್ಮವನ್ನು ಅವಹೇಳನಕಾರಿಯಾಗಿ ನಿಂದಿಸಿರುವುದಾಗಿ ಹಿಂದೂ ಜಾಗರಣ ವೇದಿಕೆಯ ಮುಖಂಡ ರಾಧಾಕೃಷ್ಣ ಅಡ್ಯಂತಾಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ವಿಟ್ಲ ಠಾಣೆಯ ಎಸೈ ಮಂಜುನಾಥ ಅವರಿಗೆ ವಿಟ್ಲದ ಸುನ್ನೀ ಕೋಆರ್ಡಿನೇಶನ್ ಸಮಿತಿ ದೂರು ನೀಡಿದೆ.

ಸೋಮವಾರ ವಿಟ್ಲದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾದ  ಹಿಂದೂ ಜನಜಾಗೃತಿ ಸಮಾವೇಶದಲ್ಲಿ ರಾಧಾಕೃಷ್ಣ ಅಡ್ಯಂತಾಯ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಧರ್ಮವನ್ನು ನಿಂದಿಸಿದ್ದರು. ಈತನ  ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News