×
Ad

ಹಾಸನ ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Update: 2022-06-07 23:05 IST

ಹಾಸನ: ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪ್ರಕರಣವನ್ನ ಸಿಐಡಿಗೆ ವಹಿಸಿದ್ದು, ಅಧಿಕಾರಿಗಳು ಪೊಲೀಸರು ಜಂಟಿಯಾಗಿ ತನಿಖೆ ಮುಂದುವರಿಸಿದ್ದಾರೆ. 

ಹತ್ಯೆ ಕೇಸ್ ನ ಪ್ರಮುಖ ಆರೋಪಿ ಹಾಗೂ ಉಳಿದವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು,  ಪ್ರಮುಖ ಆರೋಪಿ ಸಿಕ್ಕ ಬಳಿಕ ಹತ್ಯೆಗೆ ನಿಖರ ಕಾರಣ ತಿಳಿಯಲಿದೆ. ಪ್ರಶಾಂತ್ ನಾಗರಾಜ್ ಹತ್ಯೆಗೆ ಸಂಚು ರೂಪಿಸಿದ್ದ ಲಾಡ್ಜ್‌ನಲ್ಲಿನ ಹಾರ್ಡ್ ಡಿಸ್ಕ್ ಮತ್ತು ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಸಹ ಸಿಐಡಿ ವಶಪಡಿಸಿಕೊಂಡಿದೆ. ಸಿಐಡಿ ಅಧಿಕಾರಿಗಳು ಪ್ರಶಾಂತ್ ನಾಗರಾಜ್ ಅವರ ಮನೆಗೆ ಭೇಟಿ ನೀಡಿದ್ದು, ಅವರ ಪತ್ನಿಯಿಂದ ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ. ಬಳಿಕ ಪ್ರಶಾಂತ್ ನಾಗರಾಜ್ ಹತ್ಯೆಗೀಡಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಜೂನ್ 1ರಂದು ಹಾಸನ ನಗರದ ಜವೇನಹಳ್ಳಿ ಮಠದ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಶಾಂತ್ ನಾಗರಾಜ್ ಅನ್ನು ಹಿಂಬಾಲಿಸಿಕೊಂಡು ಹೋಗಿರುವ ದುಷ್ಕರ್ಮಿಗಳ ತಂಡ ಹತ್ಯೆ ನಡೆಸಿ ಪರಾರಿಯಾಗಿತ್ತು. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಲ್ಲಾ ಆರೋಪಿಗಳನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ. 



 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News