×
Ad

ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಸಿಎಂ ಬೊಮ್ಮಾಯಿ

Update: 2022-06-08 11:42 IST

ಮೈಸೂರು, ಜೂ8: ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿ ಹೈಕೋರ್ಟ್ ‌ನೀಡಿರುವ ಸೂಚನೆಯಂತೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಬಿಜೆಪಿಯಿಂದ ಯಾರಿಗೂ ಆಫರ್ ಇಲ್ಲ:

ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಯಾರಿಗೂ ಆಫರ್ ಕೊಟ್ಟಿಲ್ಲ. ಅಭ್ಯರ್ಥಿಗಳ ಗೆಲುವಿಗೆ ಬೇಕಾದಷ್ಟು ಮತಗಳು ನಮ್ಮ ಬಳಿ ಇವೆ. ಕಾಂಗ್ರೆಸ್ ಅಥವಾ ಜೆಡಿಎಸ್‌ ನಡುವೆ ಏನೂ ಆಫರ್ ಇದೆಯೋ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾವೇರಿ ನೀರಾವರಿ ಪ್ರಾಧಿಕಾರದ ತೀರ್ಪು ಅಂತಿಮವಾಗಿದೆ.‌ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಪ್ರಾಧಿಕಾರ ರಚನೆ ಆಗಿರುವುದರಿಂದ ಮಧ್ಯಪ್ರವೇಶ ಮಾಡಲಾಗದು. ಏನೇ ನಿರ್ಧಾರವಿದ್ದರೂ ಪ್ರಾಧಿಕಾರವೇ ಮಾಡುತ್ತದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.‌ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ ಈ ವೇಳೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News