×
Ad

ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯಿಂದ ಕೆ.ಎಲ್. ರಾಹುಲ್ ಔಟ್, ಪಂತ್‌ಗೆ ನಾಯಕತ್ವದ ಹೊಣೆ

Update: 2022-06-08 18:57 IST
Photo:twitter

ಹೊಸದಿಲ್ಲಿ, ಜೂ.8: ಭಾರತದ ಕ್ರಿಕೆಟ್ ನಾಯಕ ಕೆ.ಎಲ್.ರಾಹುಲ್ ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಸರಣಿಯಿಂದ ಹೊರಗುಳಿದಿದ್ದಾರೆ.

 ರಾಹುಲ್ ಅನುಪಸ್ಥಿತಿಯಲ್ಲಿ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.  ರಾಹುಲ್ ನಾಯಕತ್ವದ ತಂಡಕ್ಕೆ ಪಂತ್ ಉಪ ನಾಯಕನಾಗಿ ಆಯ್ಕೆಯಾಗಿದ್ದರು.

ಕೆ.ಎಲ್.ರಾಹುಲ್ ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಉಪ ನಾಯಕನಾಗಿರುವ ರಿಷಭ್ ಪಂತ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಬುಧವಾರ ವರದಿ ಮಾಡಿದೆ.

ಗುರುವಾರ ನಡೆಯಲಿರುವ ಟ್ವೆಂಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ಅವರು ಇಶಾನ್ ಕಿಶನ್‌ರೊಂದಿಗೆ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News