ಪ್ರವಾದಿ ನಿಂದನೆ; ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ಖಂಡನೆ
Update: 2022-06-08 19:31 IST
ಮಂಗಳೂರು : ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಮತ್ತು ದಿಲ್ಲಿ ಘಟಕದ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ಖಂಡಿಸಿದೆ.
ಅಲ್ಲದೆ ಸರಕಾರವು ಅವರ ಮೇಲೆ ಪ್ರಕರಣ ದಾಖಲಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಎಸ್‌ಕೆಎಸ್‌ಎಂ ಪ್ರಧಾನ ಕಾರ್ಯದರ್ಶಿ ಕೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿ ಒತ್ತಾಯಿಸಿದ್ದಾರೆ.