ಹೈಕೋರ್ಟ್‍ಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಸಿ.ಎಂ.ಪೂಣಚ್ಚ ನೇಮಕ

Update: 2022-06-08 17:19 GMT

ಬೆಂಗಳೂರು, ಜೂ.8: ಕರ್ನಾಟಕ ಹೈಕೋರ್ಟ್‍ಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗು ಮೂಲದ  ವಕೀಲ ಚೆಪ್ಪುಡಿರ ಮೊನ್ನಪ್ಪ ಪೂಣಚ್ಚ ಅವರನ್ನು ನೇಮಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. 

ವಕೀಲರಾದ ಸಿ.ಎಂ.ಪೂಣಚ್ಚ ಅವರನ್ನು ಎರಡು ವರ್ಷಗಳವರೆಗೆ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ. ಸಿ.ಎಂ.ಪೂಣಚ್ಚ ಅವರ ಹೆಸರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ 2021ರ ಅಕ್ಟೋಬರ್‍ನಲ್ಲಿ ಮೊದಲ ಬಾರಿಗೆ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಿತ್ತು. 

ಹೈಕೋರ್ಟ್‍ನಲ್ಲಿ ಸದ್ಯ ಸಿಜೆ ಸೇರಿ 44 ನ್ಯಾಯಮೂರ್ತಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಪೂಣಚ್ಚ ಅವರ ನೇಮಕಾತಿಯಿಂದಾಗಿ ನ್ಯಾಯಮೂರ್ತಿಗಳ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಬೆಂಗಳೂರು, ಧಾರವಾಡ, ಕಲಬುರಗಿ ಪೀಠಗಳಿಗೆ ಒಟ್ಟು 62 ನ್ಯಾಯಮೂರ್ತಿ ಹುದ್ದೆಗಳು ಮಂಜೂರಾಗಿವೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News